
ದೇವದುರ್ಗ,ಮೇ.6-ದೇವದು ರ್ಗ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೧೧ ನೇ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆಯನ್ನು ಪಟ್ಟಣದ ಕೊಪ್ಪಳ ಕ್ರಾಸ್ ಬಳಿಯ ಶ್ರೀ ಬಸವ ಪದವಿ ಮಹಾ ವಿದ್ಯಾಲ ಯದಲ್ಲಿ ಸರಳವಾಗಿ ಆಚರಿಸ ಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ತಾಲೂಕ ಗೌರವ ಕೋಶಾಧ್ಯಕ್ಷರಾದ ತಿರುಪತಿ ಸೂಗೂರು ಅವರು ಭುವ ನೇಶ್ವರಿ ಭಾವಚಿತ್ರಕ್ಕೆ ಮಾಲಾ ರ್ಪಣೆ ಮಾಡಿ ಪೂಜೆ ಸಲ್ಲಿಸಿ ದರು.ಈ ಸಂದರ್ಭದಲ್ಲಿ ಮಾ ತನಾಡಿದ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘ ಟನಾ ಕಾರ್ಯದರ್ಶಿಗಳಾದ ವೇಣುಗೋಪಾಲ್ ಗೌಡ ಪಾಟೀಲ್ ಜಾಲಹಳ್ಳಿ ಅವರು, ಕನ್ನಡವು ನಮ್ಮ ಮಾತೃ ಭಾಷೆಯಾಗಿದ್ದು, ನಾಡು ನುಡಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ ಶ್ರೀನಾಲ್ವಡಿ ಕೃಷ್ಣರಾ ಜ ಒಡೆಯರ್ ಹಾಗೂ ಅಂದಿ ನ ಮೈಸೂರು ರಾಜ್ಯದ ದಿವಾ ನರಾಗಿದ್ದ ಸರ್ ಎಂ ವಿಶ್ವೇ ಶ್ವರಯ್ಯ ಮತ್ತು ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆಯನ್ನು ಸ್ಮರಿಸಿದರು. ನಾಡು ನುಡಿ ಮತ್ತು ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಕನ್ನಡಿಗರೆಲ್ಲರೂ ಒಂದಾಗಬೇಕೆAದು ಅವರು ಅಭಿಪ್ರಾಯಪಟ್ಟರು.
ಪ್ರಗತಿಪರ ಹೋರಾಟಗಾರರು ಹಾಗೂ ಚಿಂತಕರಾದ ಜಿಲ್ಲಾ ಎಂ ಆರ್ ಎಚ್ ಎಸ್ ಅಧ್ಯಕ್ಷರಾದ ಹನುಮಂತಪ್ಪ ಮನ್ನಾಪುರ್ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ದಿನಗಳಲ್ಲಿ ಕನ್ನಡ ಭಾಷಾ ಶಿಕ್ಷಣಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು. ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಕುವೆಂಪು ಹಾಗೂ ಶಿವರಾಮ ಕಾರಂತರನ್ನು ಸ್ಮರಿಸುವುದು ಅಗತ್ಯ ಎಂದರು. ದೇವದುರ್ಗ ತಾಲೂಕಿನಲ್ಲಿ ೨೦೧೦ ರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಸಾಹಿತ್ಯ ಚಟುವಟಿಕೆಗಳು ಮತ್ತು ಸಮ್ಮೇಳನಗಳನ್ನು ಹೆಚ್ಚಾಗಿ ನಡೆಸಲು ಕ್ರಿಯಾ ಯೋಜನೆ ರೂಪಿಸಬೇಕೆಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಚ್. ಶಿವರಾಜ್ ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಸಮಸ್ತ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದೆ. ಇಲ್ಲಿಯವರೆಗೆ ಪರಿಷತ್ತಿನಿಂದ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ನಡೆಸಲಾಗಿದೆ. ನಾಡು ನುಡಿ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪರಿಷತ್ತಿನಿಂದ ದತ್ತಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕಲೆ, ಸಾಹಿತ್ಯ, ಸಂಗೀತ, ಜಾನಪದ, ನಾಟಕ ರಂಗಭೂಮಿ ಒಳಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಏಳು ಕೋಟಿ ಕನ್ನಡಿಗರ ಆಸ್ತಿಯಾಗಿದೆ. ಸರ್ಕಾರ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಹೊಂದಿದೆ. ವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಅವರು ಆಶಿಸಿದರು.
ಈ ಸಂದರ್ಭದಲ್ಲಿ ವಿದ್ಯಾ ಸಂಸ್ಥೆಯ ಪ್ರಾಚಾರ್ಯ ಶಾಮ್ ಸುಂದರ್, ಉಪನ್ಯಾಸಕ ನಿತೀಶ್ ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಕಾರ್ಯದರ್ಶಿ ಶಿವರಾಜ್ ರುದ್ರಾಕ್ಷಿ ಸ್ವಾಗತಿಸಿದರು. ಶಿವರಾಜ್ ಅಮರಾಪುರ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು.