March 19, 2026
IMG-20251103-WA0103

ಸಿರವಾರ, ಡಿ.11- ಕಾರ್ಯನಿರತ ಪತ್ರಕರ್ತರ ಸಂಘದ ಸಿರವಾರ ತಾಲ್ಲೂಕ ಘಟಕದ ೨೦೨೫-೨೦೨೮ನೇ ಸಾಲಿನ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯನ್ನು ಇದೇ ಡಿ.೧೪ ಭಾನುವಾರದಂದು ಮದ್ಯಾಹ್ನ ೦೩ ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಗುರುನಾಥ ಅವರು ತಿಳಿಸಿದ್ದಾರೆ.
ಕಾರ್ಯನಿರತ ಪತ್ರಕರ್ತರ ರಾಜ್ಯ ಸಂಘದ ಸೂಚನೆ ಮೇರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕ ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಅದರಂತೆ ಸಿರವಾರ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಇದೇ ಭಾನುವಾರ ಚುನಾವಣೆ ನಡೆಸಲಾಗುವುದು. ಹಾಗಾಗಿ ಅಂದು ಎಲ್ಲಾ ಪತ್ರಕರ್ತರು ಹಾಜರಿದ್ದು ಚುನಾವಣೆ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸಲು ಸಹಕರಿಸಬೇಕು ಎಂದು ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!